ಆಗುಂಬೆ ವಲಯ: ಮೇಗರವಳ್ಳಿ ಅರಣ್ಯ ಇಲಾಖೆ,ಆರೋಗ್ಯ ಇಲಾಖೆ ಮೇಗರವಳ್ಳಿ ಮತ್ತು ಗ್ರಾಮ ಪಂಚಾಯಿತಿ ಮೇಗರವಳ್ಳಿ ಸಹಯೋಗದಲ್ಲಿ ಮೇಗರವಳ್ಳಿ ಆಸ್ಪತ್ರೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮ.

ಅರಣ್ಯಾಧಿಕಾರಿಗಳು(ಮೇಗರವಳ್ಳಿ ) ಮತ್ತು ಮೇಗರವಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ. ಗ್ರಾಮ ಪಂಚಾಯಿತಿ ಮೇಗರವಳ್ಳಿ. ಸಹಯೋಗದಲ್ಲಿ ಇಂದು ಬೆಳಿಗ್ಗೆ ಮೇಗರವಳ್ಳಿ ಆಸ್ಪತ್ರೆಯ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡಗಳನ್ನು ನೆಡುವ ಮೂಲಕ ವನಮಹೋತ್ಸವ ಆಚರಣೆ ನಡೆಸಲಾಯಿತು .ಕ್ಷೇತ್ರದ ಶಾಸಕರಾದ ಆರಗ ಜ್ಞಾನೇಂದ್ರರವರು ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು .ವಲಯ ಅರಣ್ಯಾಧಿಕಾರಿ ಕುಮಾರಿ ಉಮಾ ,ವೈದ್ಯಾಧಿಕಾರಿ ಡಾಕ್ಟರ್ ಅರವಿಂದ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪ್ರತಿಮಾ ಪುಟ್ಟಪ್ಪ .ಉಪಾಧ್ಯಕ್ಷರಾದ ಶ್ರೀನಿವಾಸ್, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪ್ರಮೋದ್ ಹೆಗ್ಡೆ ,ಭಾರತೀಯ ಜನತಾ ಪಕ್ಷದ ತೀರ್ಥಹಳ್ಳಿ ತಾಲ್ಲೂಕು ಘಟಕದ ಅಧ್ಯಕ್ಷರಾದ ಬಾಳೆಬೈಲು ರಾಘವೇಂದ್ರ ಹಾಗೂ ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ಯಶೋದ ಮಂಜುನಾಥ್ ರವರು ಉಪಸ್ಥಿತರಿದ್ದರು .ಹಾಗೂ ಗ್ರಾಮ ಪಂಚಾಯಿತಿಯ ಸದಸ್ಯರು, ಅರಣ್ಯ ಇಲಾಖೆಯ ಸಿಬ್ಬಂದಿ ವರ್ಗ, ಆಶಾಆರೋಗ್ಯ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಆಸ್ಪತ್ರೆಯ ಸಿಬ್ಬಂದಿವರ್ಗ ,ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು .ಕಾರ್ಯಕ್ರಮದಲ್ಲಿ ವನ ಮಹೋತ್ಸವದ ಅಂಗವಾಗಿ ಗಿಡಗಳನ್ನು ನೆಟ್ಟನಂತರ ಸರಳ ಸಮಾರಂಭದಲ್ಲಿ ಮೇಗರವಳ್ಳಿ ಅರಣ್ಯ ಇಲಾಖೆ ವತಿಯಿಂದ ವಲಯ ಅರಣ್ಯಾಧಿಕಾರಿ ಕುಮಾರಿ ಉಮಾ ಮತ್ತು ಸಿಬ್ಬಂದಿ ವರ್ಗದವರು ಕ್ಷೇತ್ರದ ಶಾಸಕರಾದ ಆರಗ ಜ್ಞಾನೇಂದ್ರರವರನ್ನು , ಆಸ್ಪತ್ರೆಯ ವೈದ್ಯಾಧಿಕಾರಿಡಾಕ್ಟರ್ ಅರವಿಂದ್ ,ಹಿರಿಯ ಆರೋಗ್ಯ ನಿರೀಕ್ಷಕರು ತಾಲ್ಲೂಕು ನೌಕರರ ಸಂಘದ ಅಧ್ಯಕ್ಷ ಸತೀಶ ಶೆಟ್ಟಿ ರವರನ್ನು, ಆರೋಗ್ಯ ಇಲಾಖೆಯ ಸಿಬ್ಬಂದಿಗಳನ್ನು, ಅಂಗನವಾಡಿ ಕಾರ್ಯಕರ್ತೆಯರನ್ನು, ಸಹಾಯಕಿಯರನ್ನು ಹಾಗೂ ಆರೋಗ್ಯ ಆಶಾ ಕಾರ್ಯಕರ್ತರನ್ನು ಸನ್ಮಾನಿಸಲಾಯಿತು .ಈ ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆ ಮತ್ತು ವನಮಹೋತ್ಸವ ಹಾಗೂ ಅರಣ್ಯ ಉಳಿಸುವ ಬಗ್ಗೆ ಹಾಗೂ ಕೊರೋನ ರೋಗ ನಿಯಂತ್ರಣ ಚಿಕಿತ್ಸೆ ಬಗ್ಗೆ ಮತ್ತು ಆಸ್ಪತ್ರೆ ವೈದ್ಯಾಧಿಕಾರಿಗಳ ಬಗ್ಗೆ ಕೊರೋನಾ ವಾರಿಯರ್ಸ್ ಸೇವೆಗಳ ಬಗ್ಗೆ ಕ್ಷೇತ್ರದ ಶಾಸಕರಾದ ಆರಗ ಜ್ಞಾನೇಂದ್ರ ಹಾಗೂ ವಲಯ ಅರಣ್ಯಾಧಿಕಾರಿ ಕುಮಾರಿ ಉಮಾರವರು ಮಾತನಾಡಿರುವುದು ದೃಶ್ಯವನ್ನು leoaroza.Facebook ನಲ್ಲಿ ವೀಕ್ಷಿಸಬಹುದು .

ವರದಿ: ಲಿಯೋ ಅರೋಜ

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
