ಬೆಂಗಳೂರು: ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಶಿವಮೊಗ್ಗ, ಉಡುಪಿ ಮತ್ತು ಚಾಮರಾಜನಗರ ಜಿಲ್ಲೆಗಳ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ವೀಡಿಯೊ ಸಂವಾದ ನಡೆಸಿದರು – ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ.

ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ರವರು ಇಂದು ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಶಿವಮೊಗ್ಗ, ಉಡುಪಿ ಮತ್ತು ಚಾಮರಾಜನಗರ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ವೀಡಿಯೊ ಸಂವಾದ ನಡೆಸಿದರು.

ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿ ಡಾII ಇ.ವಿ.ರಮಣರೆಡ್ಡಿ , ಅಪರ ಮುಖ್ಯಕಾರ್ಯದರ್ಶಿಗಳು ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಗೃಹ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಆರೋಗ್ಯ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಜಾವೇದ್ ಅಖ್ತರ್ ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
