ಬೆಳಗಾಂ: ಬೆಳಗಾಂ ನಲ್ಲಿ ರಾಜ್ಯ ಉಸ್ತುವಾರಿಗಳಾಗಿ ನೇಮಕವಾಗಿರುವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಅರುಣ್ ಸಿಂಗ್ ಅವರ ಸನ್ಮಾನ.
ಇಂದು ಬೆಳಗಾಂ ನಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು, ರಾಜ್ಯ ಉಸ್ತುವಾರಿಗಳಾಗಿ ನೇಮಕವಾಗಿರುವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಅರುಣ್ ಸಿಂಗ್ ಅವರನ್ನು ಸನ್ಮಾನಿಸಿದರು. ನಂತರ ಕೋರ್ ಕಮಿಟಿ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಕೇಂದ್ರ ಗಣಿ & ಭೂವಿಜ್ಞಾನ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಿ. ಟಿ. ರವಿ, ಉಪಮುಖ್ಯಮಂತ್ರಿಗಳಾದ ಶ್ರೀ ಎಂ. ಗೋವಿಂದ ಕಾರಜೋಳ, ಬೃಹತ್ ಮತ್ತು ಮಧ್ಯಮ ಗಾತ್ರದ ಕೈಗಾರಿಕಾ ಸಚಿವರಾದ ಶ್ರೀ ಜಗದೀಶ್ ಶೆಟ್ಟರ್, ಕಂದಾಯ ಸಚಿವರಾದ ಶ್ರೀ ಆರ್. ಅಶೋಕ್, ಗ್ರಾಮೀಣ ಮತ್ತು ಪಂಚಾಯತ್‌ರಾಜ್ ಸಚಿವರಾದ ಶ್ರೀ ಕೆ. ಎಸ್. ಈಶ್ವರಪ್ಪ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಅರುಣ್ ಕುಮಾರ್, ರಾಜ್ಯ ಉಪಾಧ್ಯಕ್ಷರಾದ ಶ್ರೀ ಅರವಿಂದ ಲಿಂಬಾವಳಿ ಉಪಸ್ಥಿತರಿದ್ದರು.

ವರದಿ: ಗೌತಮ್ ಕೆ.ಎಸ್
