ಹೊಸನಗರ: ಇಂದು (28-10-2020) MSIL ಅಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಹೆಚ್.ಹಾಲಪ್ಪ ನವರುಹೊಸನಗರ ತಾ.ಪಂ ಅವರಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಆಯೋಜಿಸಿದ್ದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಪೋಷಣ್ ಅಭಿಯಾನದ ಅಡಿಯಲ್ಲಿ ಹೊಸನಗರ ತಾ. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕರಿಗೆ ಸ್ಮಾರ್ಟ್‌ಫೋನ್ ವಿತರಣಾ ಸಮಾರಂಭದಲ್ಲಿ ಪಾಲ್ಗೊಂಡು, ಫಲಾನುಭವಿಗಳಿಗೆ ಸಾಂಕೇತಿಕವಾಗಿ ಸ್ಮಾರ್ಟ್ ಫೋನ್ ವಿತರಿಸಿದರು.

ಈ ಸಂದರ್ಭದಲ್ಲಿ ತಾ.ಪಂ ಅಧ್ಯಕ್ಷರು,ಸದಸ್ಯರು, ಜಿ.ಪಂ, ಪ.ಪಂ ಸದಸ್ಯರುಗಳು, ಅಧಿಕಾರಿಗಳು ಹಾಗೂ ಪಕ್ಷದ ವಿವಿಧ ಹಂತದ ಮುಖಂಡರು ಉಪಸ್ಥಿತರಿದ್ದರು.

ವರದಿ: ಗೌತಮ್ ಕೆಎಸ್
