ಬೆಂಗಳೂರು : ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಕರ್ನಾಟಕದಲ್ಲಿ ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಪೂರ್ಣಗೊಂಡ ಹೆದ್ದಾರಿಗಳ ಲೋಕಾರ್ಪಣೆ ನೆರವೇರಿಸಿದರು.

ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ರವರು ಇಂದು ಕರ್ನಾಟಕದಲ್ಲಿ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ 8 ಪೂರ್ಣಗೊಂಡ ಹೆದ್ದಾರಿಗಳ ಲೋಕಾರ್ಪಣೆ ನೆರವೇರಿಸಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಕೇಂದ್ರ ಸಚಿವರುಗಳಾದ ಡಿ. ವಿ. ಸದಾನಂದ ಗೌಡ, ಪ್ರಹ್ಲಾದ್ ಜೋಶಿ, ವಿಜಯ್ ಕುಮಾರ್ ಸಿಂಗ್, ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ , ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಸಚಿವ ಸಂಪುಟದ ಸದಸ್ಯರು, ಸಂಸದರು, ಶಾಸಕರು ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್
