ಧರ್ಮಸ್ಥಳ: ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಇಂದು ಗೃಹಕಚೇರಿ ಕೃಷ್ಣಾದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಪ್ರಾಯೋಜಿತ ‘ಜ್ಞಾನತಾಣ’ ಅಂತರ್ಜಾಲ ಶಿಕ್ಷಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸರ್ವಧರ್ಮ ಸಮನ್ವಯ, ಮಾನವಜಾತಿ ತಾನೊಂದೇ ವಲಂ ಎನ್ನುವುದನ್ನು ಧರ್ಮಸ್ಥಳ ಶ್ರೀಕ್ಷೇತ್ರ ಮುಂದುವರಿಸಿಕೊಂಡು ಬರುತ್ತಿರುವುದು ಶ್ಲಾಘನೀಯ. ಆನ್ ಲೈನ್ ಮೂಲಕ ಪೂಜ್ಯ ಶ್ರೀ ವೀರೇಂದ್ರ ಹೆಗ್ಗಡೆಯವರ ಸಮಕ್ಷಮ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಪ್ರಾಯೋಜಿತ ಅಂತರ್ಜಾಲ ಶಿಕ್ಷಣ ಕಾರ್ಯಕ್ರಮ ‘ಜ್ಞಾನತಾಣ’ವನ್ನು ಇಂದು ಉದ್ಘಾಟಿಸಲಾಯಿತು.

ವರದಿ: ಸಿಸಿಲ್ ಸೋಮನ್
