ಬೆಂಗಳೂರು : ಗ್ರಾ.ಪಂ ಚುನಾವಣೆಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಆಶೀರ್ವದಿಸಿದ ಮತದಾರರಿಗೆ ಧನ್ಯವಾದಗಳು – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ.

ಗ್ರಾ.ಪಂ ಚುನಾವಣೆಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಆಶೀರ್ವದಿಸಿದ ಮತದಾರರಿಗೆ ಧನ್ಯವಾದಗಳು, ವಿಜೇತರಿಗೆ ಅಭಿನಂದನೆಗಳು. ಸವಾಲಿನ ಪರಿಸ್ಥಿತಿಗಳಲ್ಲಿ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ಅಭಿವೃದ್ಧಿ ಕಾರ್ಯಗಳನ್ನು ಜನ ಬೆಂಬಲಿಸಿದ್ದಾರೆ, ವಿಪಕ್ಷಗಳ ಆರೋಪಗಳಿಗೆ ಸೂಕ್ತ ಉತ್ತರ ನೀಡಿದ್ದಾರೆ.
ರಾಜ್ಯದಲ್ಲಿ ನಡೆದಿರುವ ಒಟ್ಟು 5,728 ಗ್ರಾ.ಪಂ ಗಳ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 3,800 ಗ್ರಾ.ಪಂ ಗಳಲ್ಲಿ, ಅಂದರೆ ಶೇ. 60ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ ಎಂಬ ಮಾಹಿತಿಯಿದ್ದು, ಜನರ ವಿಶ್ವಾಸದ ದ್ಯೋತಕವಾಗಿದೆ. ರಾಜ್ಯ ಹಾಗೂ ರಾಷ್ಟ್ರದಲ್ಲಿ ಬಿಜೆಪಿ ದಿನೇದಿನೇ ಮತ್ತಷ್ಟು ಬಲಗೊಳ್ಳುತ್ತಾ ಮುನ್ನಡೆದಿದೆ.

ವರದಿ: ಸಿಸಿಲ್ ಸೋಮನ್
