ಹೊಸನಗರ: ಶಾಸಕರಾದ ಹೆಚ್.ಹಾಲಪ್ಪ ನವರು ಹೊಸನಗರ ತಾ. ಜಯನಗರ ದಲ್ಲಿ ಆಯೋಜಿಸಿದ್ದ ಬಿಜೆಪಿ ಹೊಸನಗರ ಮಂಡಲದ “ಪ್ರಶಿಕ್ಷಣ ವರ್ಗ” ಕಾರ್ಯಕ್ರಮ ಉದ್ಘಾಟಿಸಿದರು
MSIL ಅಧ್ಯಕ್ಷರು ಹಾಗೂ ಶಾಸಕರಾದ ಹೆಚ್.ಹಾಲಪ್ಪ ನವರು ಹೊಸನಗರ ತಾ. ಜಯನಗರ ದಲ್ಲಿ ಆಯೋಜಿಸಿದ್ದ ಬಿಜೆಪಿ ಹೊಸನಗರ ಮಂಡಲದ “ಪ್ರಶಿಕ್ಷಣ ವರ್ಗ” ಕಾರ್ಯಕ್ರಮ ಉದ್ಘಾಟಿಸಿ, ಸಮಾರಂಭ ಉದ್ದೇಶಿಸಿ ಮಾತನಾಡಿದರು.

ನಂತರ ಪತ್ರಿಕಾ ಗೋಷ್ಠಿ ನೆಡೆಸಿ ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಶಾಶ್ವತ ಪರಿಹಾರ ಕಲ್ಪಿಸಲು ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆ ನೆಡೆದ ಸಭೆ ಬಗ್ಗೆ, ಚರ್ಚಿಸಿದ ವಿಷಯಗಳು ಹಾಗೂ ಸಮಸ್ಯೆ ಇತ್ಯರ್ಥಕ್ಕೆ ಅಧಿಕಾರಿಗಳ ನೇಮಕವಾಗಿರುವ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರು, ತಾ.ಮಂಡಲ ಅಧ್ಯಕ್ಷರು, ಚುನಾಯಿತ ಪ್ರತಿನಿಧಿಗಳು, ವಿವಿಧ ಮೋರ್ಚಾ, ಪ್ರಕೋಷ್ಠಗಳ ಪ್ರಮುಖರು, ಪದಾಧಿಕಾರಿಗಳು, ಅಪೇಕ್ಷಿತ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

ವರದಿ: ಗೌತಮ್ ಕೆ.ಎಸ್
