ಬೆಂಗಳೂರು : ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ದೇಶವೇ ಮೊದಲು ಎಂಬ ಧ್ಯೇಯದೊಂದಿಗೆ, 135 ವರ್ಷಗಳ.

‘ಭಾರತೀಯ ರಾಷ್ಟ್ರೀಯ ಕಾಂಗ್ರೆಸ್’ ದೇಶದ ಸ್ವಾತಂತ್ರ್ಯ ಸಂಗ್ರಾಮದಿಂದ ಹಿಡಿದು ಇಂದಿನವರೆಗೂ ದೇಶವೇ ಮೊದಲು ಎಂಬ ಧ್ಯೇಯದೊಂದಿಗೆ, 135 ವರ್ಷಗಳ,
ಐಕ್ಯತೆ, ನ್ಯಾಯ, ಸಮಾನತೆ, ಅಹಿಂಸೆ, ಸ್ವಾತಂತ್ರ್ಯ. ಸ್ವಾಭಿಮಾನದ ಜೊತೆಗೆ, ನಾವಿಂದು 136ನೇ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ.
ಭಾರತದ ವಿವಿಧತೆಯಲ್ಲಿ ಏಕತೆಯನ್ನು ಕಂಡುಕೊಳ್ಳುವ ಮಹತ್ವದೊಂದಿಗೆ ‘ಭಾರತೀಯ ರಾಷ್ಟ್ರೀಯ ಕಾಂಗ್ರೆಸ್’ ಸ್ಥಾಪನೆಯಾಯಿತು. ಇದು ಭಾರತೀಯರನ್ನ ಒಟ್ಟುಗೂಡಿಸಿ ಸ್ವಾತಂತ್ರ್ಯ ಸಂಗ್ರಾಮದ ಜೀವ ಸೆಲೆಯಾಯಿತು. ತ್ಯಾಗ, ಬಲಿದಾನದಿಂದ ಗಳಿಸಿದ ಸ್ವಾತಂತ್ರ್ಯದ ಸಾರ್ಥಕತೆಗೆ ಪ್ರಜಾಪ್ರಭುತ್ವ, ಸಂವಿಧಾನದ ಮೂಲಕ ಭವಿಷ್ಯದ ದೃಷ್ಟಿಕೋನ ನೀಡಿತು.
ಕರ್ನಾಟಕದೊಂದಿಗೆ ಕಾಂಗ್ರೆಸ್ ಕೆಪಿಸಿಸಿ ರಚನೆ ವಿ.ಪಿ ಮಾಧವ್ ರಾವ್ ಅವರ ಅಧ್ಯಕ್ಷತೆಯಲ್ಲಿ 1920 ರಲ್ಲಿ ನಡೆದ ಕರ್ನಾಟಕ ರಾಜ್ಯ ರಾಜಕೀಯ ಸಮ್ಮೇಳನದಲ್ಲಿ ಎಲ್ಲಾ ಕನ್ನಡ ಮಾತನಾಡುವ ಪ್ರದೇಶಗಳನ್ನು ಏಕೀಕರಿಸುವಂತೆ ಒತ್ತಾಯಿಸಿ ಸರ್ವಾನುಮತದ ನಿರ್ಣಯ ಅಂಗೀಕಾರ.
136ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಹಾತ್ಮಾ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಕಾರ್ಯಾಧ್ಯಕ್ಷ ಸಲೀಂ ಅಹಮದ್ , ಮಾಜಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ , ಮಾಜಿ ಕೇಂದ್ರ ಸಚಿವಕೆ ಹೆಚ್ ಮುನಿಯಪ್ಪ , ಮಾಜಿ ಸಚಿವ ರಾಮಲಿಂಗಾರೆಡ್ಡಿ ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್
