ಬೆಂಗಳೂರು : ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ ವತಿಯಿಂದ ನಿರ್ಮಿಸಲಾಗುತ್ತಿರುವ ತಾಜ್ಯ ವಿದ್ಯುತ್ ಉತ್ಪಾದನಾ ಘಟಕಕ್ಕೆ ಆನ್ ಲೈನ್ ಮೂಲಕ ಶಿಲಾನ್ಯಾಸ.

ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ ವತಿಯಿಂದ ನಿರ್ಮಿಸಲಾಗುತ್ತಿರುವ ತಾಜ್ಯ ವಿದ್ಯುತ್ ಉತ್ಪಾದನಾ ಘಟಕಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರು ಇಂದು ಆನ್ ಲೈನ್ ಮೂಲಕ ಶಿಲಾನ್ಯಾಸ ನೆರವೇರಿಸಿದರು.
ಶಾಸಕ ಎ.ಮಂಜುನಾಥ್, ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿ ಡಾ ಇ.ವಿ.ರಮಣ ರೆಡ್ಡಿ, ಇಂಧನ ಇಲಾಖೆ ಪ್ರಧಾನಕಾರ್ಯದರ್ಶಿ ಕಪಿಲ್ ಮೋಹನ್, ಕೆ.ಪಿ.ಸಿ.ಎಲ್ ವ್ಯವಸ್ಥಾಪಕ ನಿರ್ದೇಶಕ ವಿ.ಪೊನ್ನುರಾಜ್ ಮತ್ತಿತರರು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್
