ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸದಾಶಿವನಗರದ ನಿವಾಸದಲ್ಲಿ ಬೆಂಗಳೂರು ನಗರ ಜಿಲ್ಲೆ, ಗ್ರಾಮಾಂತರ ಜಿಲ್ಲೆ ಹಾಗೂ ರಾಮನಗರ ಜಿಲ್ಲೆಗಳ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಹಿನ್ನೆಲೆಯಲ್ಲಿ ಇಂದು ಭಾನುವಾರ ರಾತ್ರಿ ಪೂರ್ವಭಾವಿ ಸಭೆ.

ಬೆಂಗಳೂರು ನಗರ ಜಿಲ್ಲೆ, ಗ್ರಾಮಾಂತರ ಜಿಲ್ಲೆ ಹಾಗೂ ರಾಮನಗರ ಜಿಲ್ಲೆಗಳನ್ನು ಒಳಗೊಂಡ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಜ. 5 ರಂದು ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸದಾಶಿವನಗರದ ತಮ್ಮ ನಿವಾಸದಲ್ಲಿ ಭಾನುವಾರ ರಾತ್ರಿ ಪೂರ್ವಭಾವಿ ಸಭೆ ನಡೆಸಿದರು.

ಸಂಸದ ಡಿ.ಕೆ. ಸುರೇಶ್, ಶಾಸಕರಾದ ವೆಂಕಟರಮಣಪ್ಪ, ಶರತ್ ಬಚ್ಚೇಗೌಡ, ಮಾಜಿ ಶಾಸಕ ಎಚ್.ಸಿ. ಬಾಲಕೃಷ್ಣ, ಎಂಎಲ್ಸಿ ಎಸ್. ರವಿ, ರಾಮನಗರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಅಶೋಕ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

ವರದಿ: ಸಿಸಿಲ್ ಸೋಮನ್

