ಮಂಗಳೂರು: ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಶ್ರೀ ಬಿ. ಎಸ್. ಯಡಿಯೂರಪ್ಪ ಅವರು ಮಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿದರು

ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರು ಹಾಗೂ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರ ಉಪಸ್ಥಿತಿಯಲ್ಲಿ ಇಂದು ಮಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವರುಗಳಾದ ಶ್ರೀ ಪ್ರಹ್ಲಾದ್ ಜೋಶಿ, ಶ್ರೀ ಡಿ ವಿ ಸದಾನಂದ ಗೌಡ, ಉಪಮುಖ್ಯಮಂತ್ರಿ ಶ್ರೀ ಗೋವಿಂದ ಎಂ ಕಾರಜೋಳ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಸಿ ಟಿ ರವಿ, ಸಚಿವರು, ಶಾಸಕರು, ಸಂಸದರು ಮತ್ತು ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಹರ್ಷ ಸಾಗರ
