MSIL ಅಧ್ಯಕ್ಷರು ಹಾಗೂ ಶಾಸಕರಾದ ಹೆಚ್.ಹಾಲಪ್ಪ* ನವರು ಅಡಿಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರಾದ ಆರಗ ಜ್ಞಾನೇಂದ್ರ ರವರು ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿಮಾಡಿ.
ಗುಟ್ಕಾ, ನಿಷೇದದ ಸುದ್ದಿ ಹರಿದಾಡುತ್ತಿದ್ದು, ಅಡಿಕೆ ಬೆಳಗಾರರು ಆತಂಕ ಗೊಂಡಿದ್ದಾರೆ, ಮಲೆನಾಡಿನ ಪ್ರತಿಷ್ಠಿತ ಬೆಳೆಗಳಲ್ಲೊಂದಾದ ಅಡಿಕೆಯನ್ನು ಹೆಚ್ಚಾಗಿ ಗುಟ್ಕಾ ಉತ್ಪನ್ನಕ್ಕೆ ಬಳಸುತ್ತಿದ್ದು, ಗುಟ್ಕಾ ನಿಷೇಧದಿಂದ ಅಡಿಕೆ ಬೆಳಗಾರರು ಸಂಕಷ್ಟ ಎದುರಿಸುವಂತಾಗುತ್ತದೆ. ಆದ್ದರಿಂದ ಅಡಿಕೆ ಬೆಳೆಗಾರರ ಹಿತ ಕಾಯುವಂತೆ ಮತ್ತು ಕಸ್ತೂರಿ ರಂಗನ್ ವರದಿಯ ಬಗ್ಗೆ ಚರ್ಚಿಸಿ ಮನವಿ ಮಾಡಿದರು.
ಸಕಾರಾತ್ಮಕ ವಾಗಿ ಸ್ಪಂದಿಸಿದ ಮಾನ್ಯ ಮುಖ್ಯಮಂತ್ರಿಗಳು ನಮ್ಮದು ರೈತ ಪರ ಸರ್ಕಾರ ಯಾವುದೇ ಕಾರಣಕ್ಕೂ ರೈತರಿಗೆ ಹಾಗೂ ಅಡಿಕೆ ಬೆಳೆಗಾರರ ಹಿತಕ್ಕೆ ಧಕ್ಕೆಯಾಗುವ ನಿರ್ಧಾರವನ್ನು ತೆಗೆದುಕೊಳ್ಳುವುದಿಲ್ಲ, ರೈತರು ಆತಂಕಕ್ಕೆ ಒಳಗಾಗುವುದು ಬೇಡ ಎನ್ನುವ ಭರವಸೆ ನೀಡಿದ್ದಾರೆ.
ಹೊನ್ನಾಳಿ ಶಾಸಕರಾದ ರೇಣುಕಾಚಾರ್ಯ ರವರು, ವಿ.ಕ ಸಂಪಾದಕರಾದ ಹರಿಪ್ರಕಾಶ್ ಕೋಣೆಮನೆ, ಮತ್ತು ಅಡಿಕೆ ಬೆಳೆಗಾರರ ಸಂಘ ಸಂಸ್ಥೆಗಳ ನಿಯೋಗದವರು ಉಪಸ್ಥಿತರಿದ್ದರು.

By Goutham K S
