ಶಿಕಾರಿಪುರ: ರೈತರು ಹಿರಿಯ ವಕೀಲ ಹಿರೇಮಠ್ ಅವರ ನೇತೃತ್ವದಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ.
ಮಾಜಿ ಮುಖ್ಯಮಂತ್ರಿಗಳು ಸಿದ್ದರಾಮಯ್ಯ ರವರು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ನೀರಾವರಿ ಯೋಜನೆಗಾಗಿ ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ-ಹಿರೇಕೆರೂರು ತಾಲೂಕಿನ ಗ್ರಾಮಗಳಲ್ಲಿ ರೈತರ ಜಮೀನನ್ನು ನಿಯಮ ಬಾಹಿರವಾಗಿ ಸ್ವಾಧೀನಪಡಿಸಿಕೊಳ್ಳಲಾಗಿದೆ. ಸರ್ಕಾರದ ಈ ಅಸಂವಿಧಾನಿಕ ನಡೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಹೇಳಿದರು.
ಸರ್ಕಾರದಿಂದ ಅನ್ಯಾಯಕ್ಕೊಳಗಾದ ರೈತರು ಹಿರಿಯ ವಕೀಲ ಹಿರೇಮಠ್ ಅವರ ನೇತೃತ್ವದಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಸತ್ಯಾಗ್ರಹ ನಡೆಯುತ್ತಿರುವ ರಟ್ಟೀಹಳ್ಳಿಗೆ ಇಂದು ಭೇಟಿ ನೀಡಿದರು. ರೈತರ ಹೋರಾಟಕ್ಕೆ ನನ್ನ ಬೆಂಬಲವಿದೆ. ನ್ಯಾಯ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುವ ಭರವಸೆಯನ್ನೂ ಅವರಿಗೆ ನೀಡಿದ್ದರು.

ವರದಿ: ಸಿಸಿಲ್ ಸೋಮನ್
