ಬೆಂಗಳೂರು : ರಾಜ್ಯದಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವಂತಹ ಭೂಸುಧಾರಣಾ ಕಾಯ್ದೆ ತಿದ್ದುಪಡಿ ತಕ್ಷಣ ಕೈಬಿಡಬೇಕು – ಮಾಜಿ ಮುಖ್ಯಮಂತ್ರಿಗಳು ಸಿದ್ದರಾಮಯ್ಯ.
ರಾಜ್ಯದಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವಂತಹ ಭೂಸುಧಾರಣಾ ಕಾಯ್ದೆ ತಿದ್ದುಪಡಿ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿಗಳನ್ನು ತಕ್ಷಣ ಕೈಬಿಡಬೇಕು ಎಂದು ಆಗ್ರಹಿಸುತ್ತೇನೆ. ರೈತರ ಹೋರಾಟಕ್ಕೆ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲಿಸಲಿದೆ. ನಾಡಿನ ರೈತ ಸಮುದಾಯದ ಜೊತೆ ಸದಾ ನಾವಿರಲಿದ್ದೇವೆ.
ಕೇಂದ್ರ ಸರ್ಕಾರದ ರೈತ ವಿರೋಧಿ ಕಾನೂನುಗಳ ವಿರುದ್ಧ ರೈತ ಸಮುದಾಯ ನಡೆಸುತ್ತಿರುವ ಹೋರಾಟ ನ್ಯಾಯಯುತವಾಗಿದ್ದು, ಸರ್ಕಾರ ಹೋರಾಟವನ್ನು ಹತ್ತಿಕ್ಕುವ ಬದಲಾಗಿ ರೈತ ಮುಖಂಡರೊಂದಿಗೆ ಮಾತುಕತೆ ನಡೆಸಿ, ಸಮಸ್ಯೆ ಬಗೆಹರಿಸುವ ಕೆಲಸ ಮಾಡಬೇಕೆಂದು ಒತ್ತಾಯಿಸುತ್ತೇನೆ. ಈ ಹೋರಾಟದಲ್ಲಿ ಅನ್ನದಾತರ ಜೊತೆ ನಾವಿದ್ದೇವೆ – ಮಾಜಿ ಮುಖ್ಯಮಂತ್ರಿಗಳು ಸಿದ್ದರಾಮಯ್ಯ.

ವರದಿ: ಸಿಸಿಲ್ ಸೋಮನ್
