ಆನವಟ್ಟಿ: ಪದವಿಪೂರ್ವ ಆನವಟ್ಟಿಯ ಕಾಲೇಜು ಅಭಿವೃದ್ಧಿ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಶ್ರೀ ಎಸ್ ಕುಮಾರ್ ಬಂಗಾರಪ್ಪ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಪದವಿಪೂರ್ವ ಕಾಲೇಜು ಆನವಟ್ಟಿಯ ಕಾಲೇಜು ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸಭೆಯು ಮಾನ್ಯ ಶಾಸಕರು ಹಾಗೂ ವಿಧಾನ ಮಂಡಲದ ಅಧೀನ ಶಾಸನ ರಚನಾ ಸಮಿತಿಯ ಅಧ್ಯಕ್ಷರಾದ ಶ್ರೀ ಎಸ್ ಕುಮಾರ್ ಬಂಗಾರಪ್ಪ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಮಿತಿಯ ಬಹುಮುಖ್ಯ ಚರ್ಚಾ ವಿಷಯಗಳು. ಸಧ್ಯದಲ್ಲಿಯೇ ಪದವಿಪೂರ್ವ ಕಾಲೇಜುಗಳು ಆರಂಭ, ವಿಧ್ಯಾರ್ಥಿಗಳು ಪೋಷಕರ ಒಪ್ಪಿಗೆ ಪತ್ರ ಹಾಗೂ ಕೋವಿಡ್ ಪರೀಕ್ಷೆ , ಮಾಸ್ಕ್ ಕಡ್ಡಾಯವಾಗಿ ಧರಿಸಿ ಕಾಲೇಜಿಗೆ ಬರುವುದು.
ವಿಧ್ಯಾರ್ಥಿಗಳಿಗೆ ಕುಡಿಯುವ ನೀರು, ಶೌಚಾಲಯ ಒಳಗೊಂಡಂತೆ ಮೂಲಭೂತ ಸೌಕರ್ಯಗಳ ಕುರಿತು ಚರ್ಚೆ.
ಕಾಲೇಜು ಪ್ರಾರಂಭವಾಗುವುದರಿಂದ, ಕೋವಿಡ್ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಕಾಲೇಜಿನ ಕೊಠಡಿಗಳ ಸ್ವಚ್ಚತೆ ಹಾಗೂ ಸ್ಯಾನಿಟೈಜೆಷನ್ ಕಡೆ ಗಮನ ಕೊಡಬೇಕು ಹಾಗೂ ಕಾಲೇಜಿನ ಆಡಳಿತ ಮತ್ತು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಅನುಗುಣವಾಗಿ ಕೆಲವು ಮಹತ್ತರ ವಿಷಯಗಳ ಕುರಿತು ಚರ್ಚೆ..
ಈ ಸಂಧರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು, ಸಮಿತಿಯ ಎಲ್ಲಾ ಸದಸ್ಯರುಗಳು ಉಪಸ್ಥಿತರಿದ್ದರು.

ವರದಿ: ಹರ್ಷ ಸಾಗರ
