ಬೆಂಗಳೂರು : ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ 500 ಕೋಟಿ ಅನುದಾನ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ರಾಜ್ಯದಲ್ಲಿ ಸ್ಥಾಪಿಸಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಿದೆ. ಆರಂಭಿಕವಾಗಿ 500 ಕೋಟಿ ಅನುದಾನ ಈ ಮೂಲಕ ಒದಗಿಸಿ ಆದೇಶ ಹೊರಡಿಸಿದೆ. ವೀರಶೈವ ಲಿಂಗಾಯಿತ ಸಮಾಜದ ಜನಾಂಗದವರು ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದು, ಇವರಲ್ಲಿ ಅಧಿಕೃತ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದವರಿದ್ದಾರೆ. ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮವನ್ನು ಕಂಪನಿ ಕಾಯ್ದೆ 2013 ಸೆಕ್ಷನ್ 7 ಅನ್ವಯ ನೊಂದಾಯಿಸಿ ಸ್ಥಾಪಿಸಲು ಆದೇಶಿಸಲಾಗಿದೆ.
ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮವನ್ನು ನಂದಿಸುವ ಕಾರ್ಯ ವಾಗಿಸಲು ಹಾಗೂ ನಿಗಮಕ್ಕೆ ವ್ಯವಸ್ಥಾಪಕ ನಿರ್ದೇಶಕರನ್ನು ಬರ್ತಿ ಮಾಡುವ ತನಕ ಸದರಿ ನಿಗಮದ ಕಾರ್ಯಕ್ರಮಗಳನ್ನು ಆಯುಕ್ತರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರಿಗೆ ವಹಿಸಿದೆ.
ನಿಗಮ ಸ್ಥಾಪನೆಗಾಗಿ ಪ್ರಾರಂಭಿಕ ವೆಚ್ಚವನ್ನು ಆಯುಕ್ತರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯವರು ಬರಿಸಿ ನಂತರ ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮದಿಂದ ಬರುವ ನಿಗಮದಿಂದ ಮರು ಭರಣ ಮಾಡಲು ರಾಜ್ಯಸರ್ಕಾರ ಆದೇಶ ಹೊರಡಿಸಿದೆ.

ವರದಿ: ಸಿಸಿಲ್ ಸೋಮನ್
