ರಾಜ್ಯದಲ್ಲಿ ಕೊರೋನಾ ಸೋಂಕು ಹರಡುವಿಕೆ ಹೆಚ್ಚುತ್ತಲೇ ಇರುವುದರಿಂದ ಅ.15ರವರೆಗೆ ಶಾಲಾ ಕಾಲೇಜುಗಲನ್ನು ಬಂದ್ ಮಾಡಲು ನಿರ್ಧರಿಸಿರುವ ರಾಜ್ಯ ಸರ್ಕಾರ, ಕೆಲ ತರಗತಿಗಳ ವಿದ್ಯಾರ್ಥಿಗಳಿಗೆ ಪಠ್ಯ ಸಂದೇಹಗಳನ್ನು ಬಗೆಹರಿಸಿಕೊಳ್ಳಲು ಶಾಲೆ, ಕಾಲೇಜಿಗೆ ಭೇಟಿ ನೀಡಲು ಇದ್ದ ಅನುಮತಿಯನ್ನೂ ರದ್ದುಪಡಿಸಿದೆ.
ಪೋಷಕರ ವಿರೋಧದ ನಡುವೆಯೂ 9ರಿಂದ 12ನೇ ತರಗತಿ ವರೆಗಿನ ಮಕ್ಕಳಿಗೆ ತಮ್ಮ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಪಠ್ಯ ಸಂಬಂಧಿ ಸಂದೇಹಗಳನ್ನು ಬಗೆಹರಿಸಿಕೊಳ್ಳಲು ಸೆ.21ರಿಂದ ಅನುಮತಿ ನೀಡಲಾಗಿತ್ತು.
ಇದೀಗ ಕೊರೋನಾ ಸೋಂಕು ಹಬ್ಬುವಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಈ ಅನುಮತಿಯನ್ನೂ ರದ್ದುಪಡಿಸಲಾಗಿದೆ.
