ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಅವರ ಸಹೋದರ ಮತ್ತು ಬೆಂಗಳೂರು ಗ್ರಾಮೀಣ ಸಂಸದ ಡಿ.ಕೆ.ಸುರೇಶ್ ಅವರು”ಗೆಲ್ಲಬಹುದಾದ” ಅಭ್ಯರ್ಥಿಯನ್ನು ಆಯ್ಕೆ ಮಾಡಲು ಕ್ಷೇತ್ರದ ನಾಯಕರೊಂದಿಗೆ ಚರ್ಚಿಸಿದ್ದಾರೆ.ಹನುಮಂತರಾಯಪ್ಪ, ಕುಸುಮಾ, ಪ್ರಿಯಾಕೃಷ್ಣ ಮತ್ತು ರಕ್ಷಾ ರಾಮಯ್ಯ ಹೆಸರು ಚಾಲ್ತಿಯಲ್ಲಿದೆ.
ಈ ಸಮಯ ದಿವಂಗತ ಡಿ ಕೆ ರವಿ ಅವರ ಪತ್ನಿ ಕುಸುಮಾ ಮತ್ತು ಅವರ ತಂದೆ ಆದಿ ಚುಂಚನಗಿರಿ ಮಠಕ್ಕೆ ಭೇಟಿ ನೀಡಿರುವುದು ತೀವ್ರ ಕುತೂಹಲ ಮೂಡಿಸಿದೆ.ಉಪಚುನಾವಣೆ ದಿನಾಂಕ ಪ್ರಕಟವಾದ ಬೆನ್ನಲ್ಲೇ ತಂದೆ-ಮಗಳ ಭೇಟಿ ಮಹತ್ವ ಪಡೆದುಕೊಂಡಿದ್ದು, ರಾಜಕೀಯ ವಲಯದಲ್ಲಿ ಚರ್ಚೆಯ ವಿಷಯವಾಗಿದೆ.ಅವರು ಆರ್ಆರ್ ನಗರದಿಂದ ಕಾಂಗ್ರೆಸ್ ಟಿಕೆಟ್ ನಿರೀಕ್ಷೆಯಲ್ಲಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ.
