ಬೆಂಗಳೂರು: ಇಂದು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯ ಆಡಳಿತ ಮಂಡಳಿಯವರೊಂದಿಗೆ ಸಭೆ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ಇಂದು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯ ಆಡಳಿತ ಮಂಡಳಿಯವರೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ 450 ಐಸಿಯು, ಆಕ್ಸಿಜಿನೇಟೆಡ್ ಹಾಸಿಗೆಗಳು ಸೇರಿದಂತೆ ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಒಟ್ಟು 850 ಹಾಸಿಗೆಗಳನ್ನು ಮೀಸಲಿಡಲು ಮುಂದಾಗಿದ್ದಾರೆ.
ಸಂಸದ ಪಿಸಿ ಮೋಹನ್, ಎಂ.ಎಸ್.ರಾಮಯ್ಯ ಆಸ್ಪತ್ರೆಯ ಅಧ್ಯಕ್ಷ ಜಯರಾಂ, ಆಡಳಿತಾಧಿಕಾರಿ ಎಂ.ಆರ್.ಶ್ರೀನಿವಾಸ ಮೂರ್ತಿ, ಆಯುಕ್ತರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗೌರವ್ ಗುಪ್ತಾ ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

