ಕೊರೊನಾ ಸೋಂಕು ನಿಯಂತ್ರಣಕ್ಕೆ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಸ್ಯಾನಿಟೈಸರ್ ಬಳಸಬೇಕು ಎಂದು ಎಷ್ಟೇ ಪ್ರಚಾರ ಮಾಡಿದರೂ ಜನ ಎಚ್ಚೆತ್ತುಕೊಳ್ಳದ ಪರಿಣಾಮ ಸೋಂಕಿನ ಸಂಖ್ಯೆ ಇಂದಿಗೆ 6 ಲಕ್ಷಕ್ಕೇರಿದೆ. ಸಾವಿನ ಸಂಖ್ಯೆ 10 ಸಾವಿರ ಸಮೀಪ ಬಂದಿದೆ.
ಜನಪ್ರತಿನಿಗಳು, ಜನರು ಕೂಡ ಸಾಯಲಾರಂಭಿಸಿದ ಪರಿಣಾಮ ಎಚ್ಚೆತ್ತುಕೊಂಡಿರುವ ಸರ್ಕಾರ ಈಗ ಮಾಸ್ಕ್‍ನ್ನು ಕಡ್ಡಾಯ ಮಾಡಿದೆ. ಮಾಸ್ಕ್ ಧರಿಸದವರಿಗೆ ಒಂದು ಸಾವಿರ ರೂ. ದಂಡ ವಿಸಲು ಮುಂದಾಗಿದೆ.
ಅದೇ ರೀತಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಮಾಸ್ಕ್ ಧರಿಸದಿರುವವರ ಮೇಲೆ ನಿಗಾವಹಿಸಲು ಮಾರ್ಷಲ್‍ಗಳನ್ನು ನೇಮಿಸಿದ್ದು, ಮಾಸ್ಕ್ ಧರಿಸದೇ ಓಡಾಡುವವರ ಗಮನಿಸಿ ಅವರು ದಂಡ ವಿಸಲಿದ್ದಾರೆ. ಬೆಳ್ಳಂಬೆಳಗ್ಗೆ ಕಾರ್ಯಾಚರಣೆಗೆ ಇಳಿದಿರುವ ಮಾರ್ಷಲ್‍ಗಳು ಮಾಸ್ಕ್ ಧರಿಸದವರಿಗೆ ದಂಡ ವಿಧಿಸುತ್ತಿದ್ದಾರೆ . ಕೋವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದ್ದರೆ ಕೊರೊನಾ ಸೋಂಕನ್ನು ನಿಯಂತ್ರಿಸಲು ಸಾಧ್ಯವಾಗುತ್ತಿತ್ತು.
