ಬೆಂಗಳೂರು: ಕೊರೋನಾ ಅಪಾಯ ಇನ್ನೂ ಕಡಿಮೆಯಾಗಿಲ್ಲ. ಸರ್ಕಾರ ವಿಧಿಸಿರುವ ನಿರ್ಬಂಧಗಳನ್ನು ಮೀರಬೇಡಿ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

ಆತ್ಮೀಯ ನಾಗರಿಕ ಬಂಧುಗಳೇ, ಕೊರೋನಾ ಅಪಾಯ ಇನ್ನೂ ಕಡಿಮೆಯಾಗಿಲ್ಲ. ಸರ್ಕಾರ ವಿಧಿಸಿರುವ ನಿರ್ಬಂಧಗಳನ್ನು ಮೀರಬೇಡಿ, ಎಲ್ಲಾ ಸುರಕ್ಷತಾ ನಿಯಮಗಳನ್ನು ಪಾಲಿಸಿ. ನೀವೂ ಸುರಕ್ಷಿತವಾಗಿರಿ, ಇತರರ ಸುರಕ್ಷತೆಗೂ ಗಮನ ನೀಡಿ. ನಾವೆಲ್ಲರೂ ಕೂಡಿ ಈ ಕೊರೋನಾ ಮಹಾಮಾರಿಯನ್ನು ಹಿಮ್ಮೆಟ್ಟಿಸೋಣ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರ ಅಧ್ಯಕ್ಷತೆಯಲ್ಲಿ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ಕೋವಿಡ್ ರೋಗಿಗಳಿಗೆ ಹಾಸಿಗೆಗಳನ್ನು ಮೀಸಲಿಡುವ ಬಗ್ಗೆ ಸಭೆ ನಡೆಯಿತು.
ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ , ಆರೋಗ್ಯ ಸಚಿವ ಡಾ.ಕೆ.ಸುಧಾಕರ್ , ನಾರಾಯಣ ಹೃದಯಾಲಯದ ಡಾ|| ದೇವಿಶೆಟ್ಟಿ, ಎಂ.ಎಸ್.ರಾಮಯ್ಯ ಆಸ್ಪತ್ರೆಯ ಅಧ್ಯಕ್ಷ ಜಯರಾಂ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

ಆಂಬುಲೆನ್ಸ್ ಸೇವೆಗಾಗಿ ಸಂಪರ್ಕಿಸಿ ಶ್ರೀ ಆಂಬುಲೆನ್ಸ್ ಗಂಗಾಧರ ಸಾಗರ :- 9663904900

