ಬೆಂಗಳೂರು : ಕೋವಿಡ್ ನಿಯಂತ್ರಣ ಕಾರ್ಯಗಳ ಜೊತೆಗೆ ಹಾನಿಗೆ ಒಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಹಾಗು ರಕ್ಷಣಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಸೂಚನೆ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

ಕರಾವಳಿ ಭಾಗದಲ್ಲಿ ಉಂಟಾಗಿರುವ ಚಂಡಮಾರುತದ ಹಿನ್ನೆಲೆಯಲ್ಲಿ ಮಾನ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ಕರಾವಳಿ ಭಾಗದ ಜಿಲ್ಲಾಧಿಕಾರಿಗಳು ಹಾಗು ಉಸ್ತುವಾರಿ ಸಚಿವರುಗಳಿಂದ ಮಾಹಿತಿ ಪಡೆದುಕೊಂಡು, ಅಗತ್ಯ ಸೂಚನೆ ನೀಡಿದ್ದಾರೆ.

ಕೋವಿಡ್ ನಿಯಂತ್ರಣ ಕಾರ್ಯಗಳ ಜೊತೆಗೆ ಹಾನಿಗೆ ಒಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಹಾಗು ರಕ್ಷಣಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಸರ್ಕಾರದಿಂದ ಯಾವುದೇ ತುರ್ತು ನೆರವು ಬೇಕಿದ್ದರೂ ಸಂಬಂಧಪಟ್ಟ ಸಚಿವರುಗಳಿಗೆ ಅಥವಾ ತಮಗೆ ನೇರವಾಗಿ ಕರೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದಾರೆ.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
