ಬೆಂಗಳೂರು: ಕೋವಿಡ್ ಲಸಿಕೆ ವಿತರಣೆಗೆ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ ಗೋಪಾಲಯ್ಯ ಚಾಲನೆ: ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ನಾಗಪುರ ವಾರ್ಡ್ ವ್ಯಾಪ್ತಿಯಲ್ಲಿ ಬರುವ ನಾರಾಯಣ ನೇತ್ರಾಲಯದಲ್ಲಿ(ಖಾಸಗೀ ಆಸ್ಪತ್ರೆ) ಕೋವಿಡ್ -19 ಲಸಿಕೆ ವಿತರಣಾ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮ ಕ್ಕೆ ಸ್ಥಳೀಯ ಶಾಸಕರು ಹಾಗೂ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ ಗೋಪಾಲಯ್ಯ ಅವರು ಆಗಮಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಸಚಿವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮೂಲಕ ನೀಡುತ್ತಿರುವ ಕೋವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆಗಳ ಬಗ್ಗೆ ಸಾರ್ವಜನಿಕರು ಯಾವುದೇ ರೀತಿ ಆತಂಕ ಪಡುವ ಅಗತ್ಯವಿಲ್ಲ, ಕರೊನ ಮಹಾಮಾರಿ ದೇಶ ದೆಲ್ಲೇಡೆ ಹರಡಿದ್ದ ಹಿನ್ನೆಲೆಯಲ್ಲಿ ಈ ಲಸಿಕೆಗಳನ್ನು ನೀಡಲಾಗುತ್ತಿದ್ದು, ಕರೋನ ಮುಕ್ತ ಕರ್ನಾಟಕ ನಿರ್ಮಾಣ ಮಾಡುವ ಸಂಬಂಧ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ನಾರಾಯಣ ನೇತ್ರಾಲಯ ಮುಖ್ಯಸ್ಥ ಡಾ, ಭುಜಂಗ ಶೆಟ್ಟಿ ರವರು ಸ್ವತಃ ಅವರೇ ಮುಂದೆ ಬಂದು , ಈ ಲಸಿಕೆ ಹಾಕಿಸಿ ಕೊಂಡರು. ನಂತರ ಮಾತನಾಡಿದ ಭುಜಂಗ ಶೆಟ್ಟಿ ರವರು ಈ ಲಸಿಕೆ ಹಾಕಿಸಿಕೊಳ್ಳುವ ದರಿಂದ ಯಾವುದೇ ಅಡ್ಡ ಪರಿಣಾಮಗಳಿಲ್ಲ, ಆದರೆ ಯಾವುದಕ್ಕೂ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಮತ್ತು ಸ್ಯಾನಿಟೈ ಸ್ ಇವುಗಳನ್ನು ತಪ್ಪದೆ ಬಳಸಬೇಕು ಯಾರು ಮೈಮರೆಯಬಾರದು ಎಂದು ಹೇಳಿದರು. ಈ ಲಸಿಕೆ ಉತ್ತಮವಾಗಿದ್ದು, ವಿಶ್ವದ ಎಲ್ಲ ರಾಷ್ಟ್ರಗಳು ಬೇಡಿಕೆ ಸಲ್ಲಿಸಿದ್ದು, ನಮ್ಮ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಬೇಕು. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದು ಲಸಿಕೆ ವಿಚಾರದಲ್ಲಿ ರಾಜಕೀಯ ಮಾಡದೇ ಎಲ್ಲರೂ ಕೈ ಜೋಡಿಸಿ ಕರೊ ನ ಮುಕ್ತ ಭಾರತ ಹಾಗೂ ಕರ್ನಾಟಕ ಮಾಡೋಣ ಎಂದು ಹೇಳಿದರು. ರೋಹಿತ್ ಶೆಟ್ಟಿ, ಬಿಬಿಎಂಪಿ ಆರೋಗ್ಯ ಅಧಿಕಾರಿ ಮಂಜುಳಾ, ಸಚಿವರ ಆಪ್ತ ಕಾರ್ಯದರ್ಶಿ ಕಾಂತರಾಜ್, ಮಂಜುನಾಥ್ ಪ್ರಸಾದ್, ವೆಂಕಟೇಶ್ ಮೂರ್ತಿ, ವೆಂಕಟೇಶ್ ಮಾಮಾ ಸೇರಿದಂತೆ ಹಾಗೂ ಆಸ್ಪತ್ರೆಯ ಮುಖ್ಯಸ್ಥರು ಸಿಬ್ಬಂದಿ ವರ್ಗ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವರದಿ: ಹರ್ಷ ಸಾಗರ

WhatsApp us