ಬೆಂಗಳೂರು: ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ.
ಮುಖ್ಯಮಂತ್ರಿ ಬಿವೈ ಯಡಿಯೂರಪ್ಪ ರವರ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ಜರುಗಿತು. ಇದೇ ಸಂದರ್ಭದಲ್ಲಿ ಯೋಜನಾ ಇಲಾಖೆಯ ‘ಅವಲೋಕನ’ ತಂತ್ರಾಂಶಕ್ಕೆ ಚಾಲನೆ ನೀಡಿ, ಕಿರುಹೊತ್ತಿಗೆಯನ್ನು ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದರು.

ಉಪಮುಖ್ಯಮಂತ್ರಿಗಳಾದ ಗೋವಿಂದ ಎಂ ಕಾರಜೋಳ , ಡಿಸಿಎಂ ಅಶ್ವಥ್ ನಾರಾಯಣ್, ಸಚಿವರುಗಳಾದ ಬಸವರಾಜ ಬೊಮ್ಮಾಯಿ,ವಿ ಸೋಮಣ್ಣ , ಕೋಟ ಶ್ರೀನಿವಾಸ ಪೂಜಾರಿ, ಆರ್. ಅಶೋಕ , ಸಿಸಿ ಪಾಟೀಲ್, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಅಪರ ಮುಖ್ಯಕಾರ್ಯದರ್ಶಿ , ಶಾಲಿನಿ ರಜನೀಶ್ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

