ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಮಾಜಿ ಪ್ರಧಾನಿ ಎಲ್.ಕೆ.ಅಡ್ವಾಣಿ ಸೇರಿದಂತೆ ಎಲ್ಲ 32 ಆರೋಪಿಗಳನ್ನು ಖುಲಾಸೆಗೊಳಿಸಿರುವ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪಿನ ಬಗ್ಗೆ ಮುಸ್ಲಿಂ ಸಂಘಟನೆಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿವೆ.
ಈ ಪ್ರಕರಣದಲ್ಲಿ ಪಕ್ಷಗಾರರಾಗಿರುವ ಮುಸ್ಲಿಂ ಸಂಘಟನೆಗಳು ಸೇರಿದಂತೆ ಕೆಲ ಸಂಸ್ಥೆಗಳು ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿ ಕಾನೂನು ಸಮರ ಮುಂದುವರೆಸಲು ನಿರ್ಧರಿಸಿವೆ.
ಸಿಬಿಐ ವಿಶೇಷ ನ್ಯಾಯಾೀಶ ಎಸ್.ಕೆ.ಯಾದವ್ ಅವರು ಇಂದು ಎಲ್ಲ 32 ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ನೀಡಿದ ನಂತರ ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಸ್ಲಿಂ ಸಂಘಟನೆ ಪರ ವಕೀಲರು, ನಾವು ತೀರ್ಪಿನ ಪೂರ್ಣ ಸಾರಾಂಶವನ್ನು ಕೂಲಂಕುಷವಾಗಿ ಓದಿ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಹೇಳಿದರು.
