ಬೆಂಗಳೂರು: ರಾಜ್ಯ ಸರ್ಕಾರ ಕೊರೊನಾದಿಂದ ಮೃತಪಟ್ಟವರ ಸಾವಿನ ಸಂಖ್ಯೆಯಲ್ಲಿ ಸುಳ್ಳು ಹೇಳುತ್ತಿದೆ – ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ.

ರಾಜ್ಯ ಸರ್ಕಾರ ಕೊರೊನಾದಿಂದ ಮೃತಪಟ್ಟವರ ಸಾವಿನ ಸಂಖ್ಯೆಯಲ್ಲಿ ಸುಳ್ಳು ಹೇಳುತ್ತಿದೆ ಮತ್ತು ಸೋಂಕಿತರ ಪ್ರಮಾಣ ಇಳಿಮುಖವಾಗಿದೆಯೆಂದು ತೋರಿಸಲು ಸೋಂಕು ಪರೀಕ್ಷೆಯನ್ನೇ ಕಡಿಮೆ ಮಾಡಿದೆ. ಇದು ನಾಡಿನ ಜನತೆಗೆ ಎಸಗುತ್ತಿರುವ ದ್ರೋಹ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ, ಜನರನ್ನು ಕತ್ತಲಲ್ಲಿಟ್ಟು ಕೊರೊನಾ ನಿಯಂತ್ರಿಸಲು ಸಾಧ್ಯವೇ?
ಇಂದಿನಿಂದಲೇ ಕೊರೊನಾ ಸೋಂಕು ಪರೀಕ್ಷೆಯನ್ನು ಹೆಚ್ಚಿಸಬೇಕು, ಮಕ್ಕಳಿಗೂ ವ್ಯಾಕ್ಸಿನ್ ನೀಡಲು ಕ್ರಮ ಕೈಗೊಳ್ಳಬೇಕು ಮತ್ತು ಕೊರೊನಾ ಮರಣಗಳನ್ನು ವಸ್ತುನಿಷ್ಠವಾಗಿ ದಾಖಲಿಸಿ, ಪ್ರತಿ ತಿಂಗಳು ಸಾವಿನ ಪ್ರಮಾಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಆಗ್ರಹಿಸುತ್ತೇನೆ.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
