ಬೆಂಗಳೂರು : ರಾಜ್ಯದಲ್ಲಿ ವಿದ್ಯುತ್ ಸರಬರಾಜಿನ ಪರಿಸ್ಥಿತಿ ಹಾಗೂ ಕೈಗಾರಿಕೆಗಳಿಗೆ ವಿದ್ಯುತ್ ಸರಬರಾಜಿನ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ಇಂದು ಸಭೆ ನಡೆಸಿದರು.

ಕೈಗಾರಿಕಾ ಸಚಿವ , ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಆರ್ಥಿಕ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್, ಅಪರ ಮುಖ್ಯಕಾರ್ಯದರ್ಶಿ ರಾಜ್ ಕುಮಾರ್ ಖತ್ರಿ, ಇಂಧನ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಜಿ.ಕುಮಾರ ನಾಯಕ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿ ವತಿಯಿಂದ ‘ಮುಖ್ಯಮಂತ್ರಿಗಳ ಪರಿಹಾರ ನಿಧಿ’ಗೆ 3 ಕೋಟಿ ರೂ.ಗಳ ದೇಣಿಗೆಯ ಚೆಕ್ ಅನ್ನು ಮುಖ್ಯಮಂತ್ರಿಗಳಿಗೆ ಕೈಗಾರಿಕಾ ಸಚಿವರು ಹಸ್ತಾಂತರ ಮಾಡಿದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
