ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಅಂಗವಾಗಿ ಇಂದು ಚಿಕ್ಕನಹಳ್ಳಿ ಮತ್ತು ಕಳ್ಳಂಬೆಳ್ಳ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಬೂತ್ ಮಟ್ಟದ ಕಾರ್ಯಕರ್ತರ ಸಭೆಯನ್ನು ಬಿಜೆಪಿ ರಾಜ್ಯ ಅಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ರವರ ನೇತೃತ್ವದಲ್ಲಿ ನಡೆಸಲಾಯಿತು. ಸಭೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.ಶಿರಾದಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲುವ ವಾತಾವರಣ ಕಂಡುಬರುತ್ತಿದ್ದು, ಮುಂದಿನ ಹತ್ತು ಹದಿನೈದು ದಿನಗಳೊಳಗೆ ಟಿಕೆಟ್ ಘೋಷಣೆ ಮಾಡಲಾಗುವುದು ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.
ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ಟಿಕೆಟ್ ವಿಚಾರದಲ್ಲಿ ಪಕ್ಷವು ಎಲ್ಲಾ ರೀತಿಯ ಬೆಳವಣಿಗೆಗಳನ್ನು ಗಮನಿಸಿ ತೀರ್ಮಾನ ಮಾಡಲಿದೆ. ಈಗಾಗಲೇ ನಾಲ್ಕೈದು ಆಕಾಂಕ್ಷಿಗಳ ಹೆಸರಿದ್ದು, ಎಲ್ಲವನ್ನೂ ಪರಿಶೀಲನೆ ನಡೆಸುತ್ತಿದ್ದೇವೆ. ಅಂತಿಮವಾಗಿ ಒಂದು ತೀರ್ಮಾನಕ್ಕೆ ಬರುತ್ತೇವೆ ಎಂದು ನಳಿನ್ ಕುಮಾರ್ ಹೇಳಿದರು.
