ಶಿವಮೊಗ್ಗ: ಶಿವಮೊಗ್ಗದಲ್ಲಿ ಮೂರು ರೈಲ್ವೇ ಮೇಲ್ಸೇತುವೆ ಕಾಮಗಾರಿಗಳಿಗೆ ಶಂಕುಸ್ಥಾಪನೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ಇಂದು ಶಿವಮೊಗ್ಗದಲ್ಲಿ ಮೂರು ರೈಲ್ವೇ ಮೇಲ್ಸೇತುವೆ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಕೇಂದ್ರ ರೈಲ್ವೇ ಸಚಿವ ಪೀಯುಷ್ ಗೋಯಲ್ ರವರು ವರ್ಚುವಲ್ ಕಾರ್ಯಕ್ರಮ ಮೂಲಕ ಉಪಸ್ಥಿತರಿದ್ದರು.
ಸಂಸದ ಬಿವೈ ರಾಘವೇಂದ್ರ, ಶಾಸಕರುಗಳಾದ ಅರಗ ಜ್ಞಾನೇಂದ್ರ, ಕುಮಾರ್ ಬಂಗಾರಪ್ಪ, ಹರತಾಳು ಹಾಲಪ್ಪ, ಬಿ.ಕೆ.ಸಂಗಮೇಶ್, ವಿಧಾನ ಪರಿಷತ್ ಸದಸ್ಯರಾದ ರುದ್ರೇಗೌಡ, ಪ್ರಸನ್ನ ಕುಮಾರ್, ಆಯನೂರು ಮಂಜುನಾಥ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

